Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:24 - ಪರಿಶುದ್ದ ಬೈಬಲ್‌

24 ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವುತ್ರಿ ಮನ್ತಲೊ ಸೊನಾರ್ ಹೊತ್ತೊ, ತೊ ಚಾಂದಿನ್ ಬಾರಿಕ್ ಅರ್ತೆಮಿ ದೆವಿಚಿ ಗುಡಿಯಾ ಕರಿ, ಅನಿ ತೆ ಕಾಮ್ ಕರ್ತಲ್ಯಾಕ್ನಿ ಫಾಯ್ದೊ ಹೊಯ್ ಸಾರ್ಕೆ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:24
8 ತಿಳಿವುಗಳ ಹೋಲಿಕೆ  

ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ದೇಮೇತ್ರಿಯನು ಈ ಜನರನ್ನು ಮತ್ತು ಇದೇ ರೀತಿಯ ಕಸುಬನ್ನು ಮಾಡುತ್ತಿದ್ದ ಇತರ ಜನರನ್ನು ಸಭೆಸೇರಿಸಿ ಅವರಿಗೆ, “ಜನರೇ, ನಮ್ಮ ಈ ಕಸುಬಿನಿಂದ ನಾವು ಬಹಳ ಹಣವನ್ನು ಗಳಿಸುತ್ತಿದ್ದೇವೆ ಎಂಬುದು ನಿಮಗೆ ಗೊತ್ತೇ ಇದೆ.


ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು