ಅಪೊಸ್ತಲರ ಕೃತ್ಯಗಳು 19:32 - ಪರಿಶುದ್ದ ಬೈಬಲ್32 ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಭೆಯಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಬೊಬ್ಬೆಹಾಕಿದರೆ, ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗಾಡಲಾರಂಭಿಸಿದರು. ಬಹುಜನರಿಗೆ ತಾವು ಅಲ್ಲಿಗೆ ಬಂದುದರ ಕಾರಣವೇ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸಭೆಯು ಗಲಿಬಿಲಿಯಾಯಿತು, ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಉಲ್ಲಿ ಲೊಕಾ ಎಕ್ ವಿಶಯಾತ್ ಬೊಬ್ ಮಾರ್‍ಲ್ಯಾರ್, ಹುರಲ್ಲಿ ಲೊಕಾ ದುಶ್ರ್ಯಾ ವಿಶಯಾತ್ ಬೊಬ್ ಮಾರುಕ್ಲಾಗಲಿ, ತಾಂಡ್ಯಾತ್ ಲೈ ಗದ್ದಲ್ ಹೊಲೊ, ಅಪ್ನಿ ಥೈ ಕಶ್ಯಾಕ್ ಎಲಾತ್ ಮನ್ತಲೆಚ್ ಲೈ ಲೊಕಾಕ್ನಿ ಗೊತ್ತ್ ನತ್ತೆ. ಅಧ್ಯಾಯವನ್ನು ನೋಡಿ |