ಅಪೊಸ್ತಲರ ಕೃತ್ಯಗಳು 19:33 - ಪರಿಶುದ್ದ ಬೈಬಲ್33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜುದೆವಾಂಚ್ಯಾ ಲೊಕಾಕ್ನಿ ಅಲೆಗ್ಸಾಂಡರ್ ಮನ್ತಲ್ಯಾಕ್ ಲೊಕಾಂಚ್ಯಾ ಇದ್ರಾಕ್ ಫಿಡೆ ಜಾವ್ನ್ ಬೊಲುಕ್ ತೆನಿ ಲೊಕಾಕ್ನಿ ಹಾತಿನ್ ಸೊನ್ನಿ ಕರುನ್ ಗಪ್ಪ್ ರ್‍ಹಾವಾ ಮನುನ್ ಲೊಕಾಂಚ್ಯಾ ವಾಂಗ್ಡಾ ವಾದ್ ಕರುನ್ ಅಪ್ಲ್ಯಾ ಸಾಟ್ನಿ ಬೊಲುಕ್ಲಾಲೊ. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.