ಅಪೊಸ್ತಲರ ಕೃತ್ಯಗಳು 19:35 - ಪರಿಶುದ್ದ ಬೈಬಲ್35 ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯ ಪವಿತ್ರ ಕಲ್ಲನ್ನು ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಕಟ್ಟಕಡೆಗೆ ಪಟ್ಟಣದ ಅಧಿಕಾರಿ ಒಬ್ಬನು ಜನಸಮೂಹವನ್ನು ಶಾಂತಗೊಳಿಸುತ್ತಾ ಹೀಗೆಂದನು: “ಎಫೆಸದ ಮಹಾಜನರೇ, ಅರ್ತೆಮೀ ಮಹಾದೇವಿಯ ಗುಡಿಯನ್ನು ಹಾಗೂ ಆಕಾಶದಿಂದ ಬಿದ್ದ ಶಿಲೆಯನ್ನು ಎಫೆಸ ಪಟ್ಟಣವು ಎಚ್ಚರಿಕೆಯಿಂದ ಸಂರಕ್ಷಿಸುತ್ತಾ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ತ್ಯಾ ಶಾರಾತ್ಲ್ಯಾ ಯಜಮಾನಾನ್ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಶಾಂತ್ ಕರುನ್, ತೆಂಕಾ ಎಪೆಸಾತ್ಲ್ಯಾ ಲೊಕಾನು ಮಳ್ಬಾಕ್ನಾ ಪಡಲಿ ಮೊಟ್ಯಾ ಅರ್ತೆಮೆ ದೆವತೆಚಿ ಗುಡಿ ಅನಿ ತಿಜಿ ಮುರ್ತಿ ರಾಕುನ್ ಘೆವ್ನ್ ಯೆಲ್ಲೆ ಎಪೆಸಾತ್ಲ್ಯಾ ಲೊಕಾನಿಚ್ ಮನ್ತಲೆ ಸಗ್ಳ್ಯಾ ಜಗಾಕುಚ್ ಗೊತ್ತ್ ಹಾಯ್ ನ್ಹಯ್. ಅಧ್ಯಾಯವನ್ನು ನೋಡಿ |