ಅಪೊಸ್ತಲರ ಕೃತ್ಯಗಳು 19:40 - ಪರಿಶುದ್ದ ಬೈಬಲ್40 ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಕಶ್ಯಾಕ್ ಮಟ್ಲ್ಯಾರ್, ಅಮಿ ಹಿತ್ತೆ ಲೈ ಘಾತ್ಕೊ ಧಂಗೊ ಉಟ್ವುಲಾಂವ್, ಸಗ್ಳ್ಯಾ ಗದ್ದಲಾಕ್ನಿ ಮಾಪಿ ಕರುಕ್ ಕೊನಾಚೆನ್ಬಿ ಹೊಯ್ನಾ ಅನಿ ಸಮಾ ಕಾರನ್ ದಿವ್ಕ್ ಅಮ್ಚ್ಯೆಕ್ಡೆ ಹೊಯ್ನಾ. ಅಧ್ಯಾಯವನ್ನು ನೋಡಿ |