Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:6 - ಪರಿಶುದ್ದ ಬೈಬಲ್‌

6 ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪಾವ್ಲುನ್ ತೆಂಚ್ಯಾ ವರ್‍ತಿ ಹಾತಾ ಥವಲ್ಲ್ಯಾ ತನ್ನಾ ತೆಂಕಾ ಪವಿತ್ರ್ ಆತ್ಮೊ ಯೆಲೊ, ತೆನಿ ಅಪ್ನಾಕ್ ವಳಕ್ ನಸಲ್ಲಿ ದುಸ್ರಿ ದುಸ್ರಿ ಭಾಶ್ಯಾ ಬೊಲ್ಯಾನಿ ಅನಿ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:6
13 ತಿಳಿವುಗಳ ಹೋಲಿಕೆ  

ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಈ ಗುಂಪಿನಲ್ಲಿ ಸುಮಾರು ಹನ್ನೆರಡು ಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು