ಅಪೊಸ್ತಲರ ಕೃತ್ಯಗಳು 19:8 - ಪರಿಶುದ್ದ ಬೈಬಲ್8 ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತ್ಯಾ ಶಾರಾತ್ ಪಾವ್ಲುನ್ ಸಿನಾಗೊಕ್ ಜಾವ್ನ್ ಧೈರ್ಯಾನ್ ಬೊಲುನ್ಗೆತ್ ಸುಮಾರ್ ತಿನ್ ಮ್ಹ್ನನ್ಯಾನ್ ಲೊಕಾಂಚ್ಯಾ ವಾಂಗ್ಡಾ ದೆವಾಚ್ಯಾ ರಾಜಾಂಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚೆ ಮನ್ ಪರ್ತುಕ್ ಬಗ್ಲ್ಯಾನ್ . ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.