ಅಪೊಸ್ತಲರ ಕೃತ್ಯಗಳು 2:14 - ಪರಿಶುದ್ದ ಬೈಬಲ್14 ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಾನಾ ಪೆದ್ರು ಹುರಲ್ಲ್ಯಾ ಆಕ್ರಾ ಲೊಕಾ ಅಪೊಸ್ತಲಾಕ್ನಿ ಘೆವ್ನ್ ಇಬೆ ರ್‍ಹಾವ್ನ್, ಗೊಳಾ ಹೊಲ್ಲ್ಯಾ ಲೊಕಾಕ್ನಿ ಮೊಟ್ಯಾ ಧನಾನ್ ಸಾಂಗುಕ್ ಲಾಗ್ಲೊ: ಜುದೆವಾನು, ಜೆರುಜಲೆಮಾತ್ಲ್ಯಾ ಲೊಕಾನು, ಮಿಯಾ ಸಾಂಗ್ತಲ್ಯಾಕ್ ಕಾನ್ ದಿವ್ನ್ ಆಯ್ಕಾ, ತುಮಿ ಕಳ್ವುನ್ ಘೆವ್ಚಿ ಹೊಲ್ಲಿ ಸಂಗ್ತಿಯಾ ಮಿಯಾ ತುಮ್ಕಾ ಸಾಂಗ್ತಾ. ಅಧ್ಯಾಯವನ್ನು ನೋಡಿ |