ಅಪೊಸ್ತಲರ ಕೃತ್ಯಗಳು 2:2 - ಪರಿಶುದ್ದ ಬೈಬಲ್2 ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಮಳ್ಬಾಕ್ನಾ ಎಗ್ದಾಚ್ ಎಕ್ ಆವಾಜ್ ಯೆಲೊ ತೊ ಆವಾಜ್ ಮೊಟೊ ವಾರೊ ಯೆಲ್ಲ್ಯಾ ಸಾರ್ಕೊ ಹೊತ್ತೊ. ಅನಿ ತೊ ಅವಾಜ್ ತೆನಿ ಬಸಲ್ಲ್ಯಾ ಘರಾತ್ ಫುರಾ ಪಗಳ್ಲೊ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.