Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:27 - ಪರಿಶುದ್ದ ಬೈಬಲ್‌

27 ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೊ ಜಿವಾಚೊ ಆತ್ಮೊ ಪಾತಾಳಾತ್ ಘಾಲಿನೆಯ್, ತಿಯಾ ಪವಿತ್ರ್ ಹೊವ್ನ್ ಹೊತ್ತೆ ಮಾಜೆ ಆಂಗ್ ಕುಸುನ್ ಜಾವ್ಕ್ ಅವಕಾಸ್ ದಿನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:27
26 ತಿಳಿವುಗಳ ಹೋಲಿಕೆ  

ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.


“ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?”


ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.


“ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.


ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಆದ್ದರಿಂದ ನನ್ನ ಹೃದಯವು ಹರ್ಷಿಸುತ್ತದೆ. ನನ್ನ ಬಾಯಿ ಆನಂದದಿಂದ ಮಾತಾಡುತ್ತದೆ. ಹೌದು, ನನ್ನ ದೇಹವು ಸಹ ನಿರೀಕ್ಷೆಯಿಂದ ಜೀವಿಸುವುದು;


ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು