Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:31 - ಪರಿಶುದ್ದ ಬೈಬಲ್‌

31 ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದಾವಿದಾನ್ ದೆವ್ ಫಿಡೆ ಕಾಯ್ ಕರ್‍ತಲೊ ಹಾಯ್ ಮನ್ತಲೆ ಕಳ್ವುನ್ ಘೆಟಲ್ಲ್ಯಾನ್, ತಸೆ ಹೊವ್ನ್ ತೆನಿ ಝಿತ್ತೊ ಹೊವ್ನ್ ಉಟ್ತಲೊ ಹೊತ್ತ್ಯಾ ಕ್ರಿಸ್ತಾಚ್ಯಾ ವಿಶಯಾತ್ ಅಶೆ ಮಟ್ಲ್ಯಾನ್; ತೆಜೆ ಶರಿರ್ ಸಮಾದಿತ್ ಕುಸುನ್ ಜಾವ್ಕ್ ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:31
7 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.


ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ: ‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು.


ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು