ಅಪೊಸ್ತಲರ ಕೃತ್ಯಗಳು 2:32 - ಪರಿಶುದ್ದ ಬೈಬಲ್32 ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ದೆವಾನ್ ಜೆಜುಕ್ ಮರ್ನಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನ್. ಅನಿ ಅಮಿ ಸಗ್ಳೆ ಹೆಕಾ ಸಾಕ್ಷಿ ಹೊವ್ನ್ ಹಾವ್. ಅಧ್ಯಾಯವನ್ನು ನೋಡಿ |
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.