ಅಪೊಸ್ತಲರ ಕೃತ್ಯಗಳು 2:38 - ಪರಿಶುದ್ದ ಬೈಬಲ್38 ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.