ಅಪೊಸ್ತಲರ ಕೃತ್ಯಗಳು 2:47 - ಪರಿಶುದ್ದ ಬೈಬಲ್47 ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅನಿ ದೆವಾಕ್ ಸ್ತುತಿ ಕರಿತ್, ಅನಿ ಸಗ್ಳ್ಯಾ ಲೊಕಾಕ್ನಿ ಮನಾನಿ ಸಗ್ಳೆ ಜಾನಾ ಮಜ್ಯಾ ಕರಿತ್. ಹರಿಎಕ್ ದಿಸ್ ಬಿ ಲೈ ದೆವಾಚಿ ರಾಕ್ವನ್ ಜೊಡುನ್ ಘೆಟಲ್ಲಿ ಲೊಕಾ ಹ್ಯಾ ತಾಂಡ್ಯಾತ್ ಧನಿ ಹಾನುನ್ ಮಿಳ್ವಿ. ಅಧ್ಯಾಯವನ್ನು ನೋಡಿ |