Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:12 - ಪರಿಶುದ್ದ ಬೈಬಲ್‌

12 ಜನರು ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡು ಹೋದರು. ಇದರಿಂದ ಜನರಿಗೆ ಬಹಳ ಆದರಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡುಹೋದರು. ಅವರಿಗಾದ ಸಾಂತ್ವನ ಅಷ್ಟಿಷ್ಟಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಝಿತ್ತೊ ಹೊತ್ತ್ಯಾ ದಾಂಡ್ಗ್ಯಾ ಝಿಲ್ಗ್ಯಾಕ್ ಘರಾಕ್ ಬಲ್ವುನ್ ಹಾನ್ತಾನಾ ತೆಂಕಾ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:12
10 ತಿಳಿವುಗಳ ಹೋಲಿಕೆ  

ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಆದ್ದರಿಂದ ಒಬ್ಬರನ್ನೊಬ್ಬರು ಸಂತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.


ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು