Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:18 - ಪರಿಶುದ್ದ ಬೈಬಲ್‌

18 ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಎಶ್ಯಾ ಸಿಮೆತ್ ಪಾಯ್ ಥವಲ್ಯಾ ಅದ್ದಿಚ್ಯಾ ದಿಸಾಕ್ನಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಯೆಳಾರ್ಬಿ ಕಸೊ ರ್‍ಹಾಲೊ ಅನಿ ಕಸೊ ಎಳ್ ಕಳದ್ಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:18
11 ತಿಳಿವುಗಳ ಹೋಲಿಕೆ  

ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.


ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.


ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು