Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:21 - ಪರಿಶುದ್ದ ಬೈಬಲ್‌

21 ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ಜುದೆವಾಕ್ನಿ ಅನಿ ಗ್ರಿಕಾಂಚ್ಯಾ ಲೊಕಾಕ್ನಿ ತೆನಿ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆವ್ಚೆ, ಅನಿ ಧನಿಯಾ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ಚೆ ಮನುನ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:21
51 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!


ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


“ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.


ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, “ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಉಪದೇಶಿಸಿದರು.


“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.


ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ನಾನು ಎಲ್ಲಾ ಜನರ ಅಂದರೆ ಗ್ರೀಕರ ಮತ್ತು ಗ್ರೀಕರಲ್ಲದವರ, ಹಾಗೂ ಜ್ಞಾನಿಗಳ ಮತ್ತು ಮೂಢರ ಸೇವೆ ಮಾಡಲೇಬೇಕು.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಅವರು ಅವನಿಗೆ, “ಪ್ರಭು ಯೇಸುವಿನಲ್ಲಿ ನಂಬಿಕೆಯಿಡು. ಆಗ ನೀನು ರಕ್ಷಣೆ ಹೊಂದುವೆ ಮತ್ತು ನಿನ್ನ ಮನೆಯವರೆಲ್ಲರೂ ರಕ್ಷಣೆ ಹೊಂದುವರು” ಎಂದು ಹೇಳಿ,


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.


ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.


ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು