Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:24 - ಪರಿಶುದ್ದ ಬೈಬಲ್‌

24 ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಾಯ್ ಬಿ ಹೊಂವ್ದಿತ್, ಮಿಯಾ ಮಾಜ್ಯಾ ಸ್ವತಾಚ್ಯಾ ಜಿವಾಚ್ಯಾ ವಿಶಯಾತ್ ಚಿಂತಾ ಕರಿನಾ ಮಾಕಾ ಧನಿಯಾ ಜೆಜುನ್ ದಿಲ್ಲಿ ಎಕುಚ್ ಗುರಿ ಹಾಯ್, ಮಾಜೆ ಪಳಾಪ್ ಮಿಯಾ ಪಳುನ್ ಸಾರುಚೆ, ತೆ ದೆವಾಚ್ಯಾ ಬರ್‍ಯಾ ಖಬ್ರೆಚ್ಯಾ ಕುರ್ಪೆಕ್ ಸಾಕ್ಷಿ ಹೊತಲ್ಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:24
59 ತಿಳಿವುಗಳ ಹೋಲಿಕೆ  

ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.


ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.


ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.


ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.


ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


“ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”


ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ.


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.


‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.


ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.


ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು