ಅಪೊಸ್ತಲರ ಕೃತ್ಯಗಳು 20:29 - ಪರಿಶುದ್ದ ಬೈಬಲ್29 ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಮಿಯಾ ಸೊಡುನ್ ಗೆಲ್ಲ್ಯಾ ಮಾನಾ ಕ್ರುರ್ ಝುಲ್ ಕುತ್ರಿ ತುಮ್ಚ್ಯಾಕ್ಡೆ ಯೆತಾತ್ ಅನಿ ತೆನಿ ಬಕ್ರ್ಯಾಂಚ್ಯಾ ತಾಂಡ್ಯಾಕ್ನಿ ಸೊಡಿನಾತ್. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.