Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:36 - ಪರಿಶುದ್ದ ಬೈಬಲ್‌

36 ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಹಿ ಗೊಸ್ಟಿಯಾ ತೆನಿ ಸಾಂಗಲ್ಲ್ಯಾ ಮಾನಾ ತೆಂಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಡೊಗ್ಲಾ ಘಾಲುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:36
9 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.


ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು