Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:7 - ಪರಿಶುದ್ದ ಬೈಬಲ್‌

7 ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಬ್ಬತಾಚ್ಯಾ ದಿಸಿ, ಅಮಿ ಸಗ್ಳ್ಯೆ ಭಾಕ್ರಿ ಮೊಡುಕ್ ಎಕ್ ಹೊವ್ನ್ ಮಿಳುನ್ ಯೆಲ್ಲ್ಯಾಂವ್, ಪಾವ್ಲು ಲೊಕಾಂಚ್ಯಾ ವಾಂಗ್ಡಾ ಬೊಲಲ್ಯಾ ದುಸ್ರ್ಯಾಂದಿಸಿ ತೊ ಥೈತ್ನಾ ಸೊಡುನ್ ಜಾನಾರ್ ಹೊತ್ತೊ, ತಸೆ ಹೊವ್ನ್ ತೆನಿ ತೆಂಚ್ಯಾ ವಾಂಗ್ಡಾ ಅರ್ದ್ಯಾ ರಾತ್ತಿನ್ ಪಾತರ್ಬಿ ಬೊಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:7
22 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.


ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.


ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.


ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.


ಇವರು ಪೌಲನಿಗಿಂತ ಮುಂಚಿತವಾಗಿಯೇ ಹೋದರು. ಅವರು ನಮಗಾಗಿ ತ್ರೋವ ಪಟ್ಟಣದಲ್ಲಿ ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು