Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:14 - ಪರಿಶುದ್ದ ಬೈಬಲ್‌

14 ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಒಪ್ಪಿನಸ್ತಾನಾ ಹೊತ್ತ್ಯಾ ಸಾಟ್ನಿ ಧನಿಯಾಚ್ಯಾ ಇಚ್ಚಾ ಸಾರ್ಕೆ ಹೊಂವ್ದಿ ಮನುನ್ ಗಪ್ಪ್ ರಾಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:14
10 ತಿಳಿವುಗಳ ಹೋಲಿಕೆ  

“ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.


ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.


ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.


ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ರೂತಳು ತನ್ನ ಜೊತೆಗೆ ಬರಲು ದೃಢನಿಶ್ಚಯ ಮಾಡಿರುವುದು ನೊವೊಮಿಗೆ ತಿಳಿಯಿತು. ಆದ್ದರಿಂದ ನೊವೊಮಿಯು ರೂತಳೊಡನೆ ವಾದಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು