ಅಪೊಸ್ತಲರ ಕೃತ್ಯಗಳು 21:20 - ಪರಿಶುದ್ದ ಬೈಬಲ್20 ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆನಿ ಹೆ ಆಯಿಕ್ಲ್ಯಾನಿ ದೆವಾಕ್ ಸ್ತುತಿ ಕರ್‍ಲ್ಯಾನಿ, ಅನಿ ತೆನಿ ಪಾವ್ಲುಕ್ ಭಾವಾ, ಹಜಾರ್ಘಟ್ಲಿ ಜುದೆವಾಂಚಿ ಲೊಕಾ ವಿಶ್ವಾಸಿ ಹೊವ್ನ್ ಬದಲಲ್ಲೆ ತಿಯಾ ಬಗುಕ್ ಲಾಗ್ಲೈಯ್, ಅನಿ ಖಾಯ್ದ್ಯಾಂಚೆ ಪುಸ್ತಕ್ ದೆವಸ್ಪಾನ್ ವಾಚುಲ್ಲಾತ್. ಅಧ್ಯಾಯವನ್ನು ನೋಡಿ |
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.