Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:23 - ಪರಿಶುದ್ದ ಬೈಬಲ್‌

23 ಆದರೆ ಈಗ ನೀನು ಏನು ಮಾಡಬೇಕೆಂಬುದನ್ನು ನಾವು ನಿನಗೆ ತಿಳಿಸುತ್ತೇವೆ: ನಮ್ಮ ಜನರಲ್ಲಿ ನಾಲ್ಕುಮಂದಿ ದೇವರಿಗೆ ಹರಕೆ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದ ನಾವು ಹೇಳಿದಂತೆ ಮಾಡು; ನಮ್ಮಲ್ಲಿ ಹರಕೆಹೊತ್ತಿರುವವರು ನಾಲ್ಕುಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ವ್ರತಹಿಡಿದವರು ನಾಲ್ಕುಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೊಲ್ಯಾರ್ ಅತ್ತಾ ತಿಯಾ ಕಾಯ್ ಕರುಚೆ ಮನುನ್ ಅಮಿ ತುಕಾ ಸಾಂಗ್ತಾವ್ ಅಮ್ಚ್ಯಾ ಲೊಕಾತ್ನಿ ಚಾರ್ ಜನಾನಿ ದೆವಾಕ್ಡೆ ಆನ್ ಕರುನ್ಗೆಟ್ಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:23
6 ತಿಳಿವುಗಳ ಹೋಲಿಕೆ  

ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.


“ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು


“ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಯ ಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


“ಈಗ ನಾವು ಏನು ಮಾಡೋಣ? ನೀನು ಬಂದಿರುವ ವಿಷಯವು ಇಲ್ಲಿರುವ ಯೆಹೂದ್ಯ ವಿಶ್ವಾಸಿಗಳಿಗೆ ತಿಳಿಯುವುದು.


ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು