ಅಪೊಸ್ತಲರ ಕೃತ್ಯಗಳು 21:3 - ಪರಿಶುದ್ದ ಬೈಬಲ್3 ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಮಿ ಸೈಪ್ರಸ್ ದ್ವಿಪಾಕ್ ಬಗುನ್ ಢಾವ್ಯಾಭಾಜುಕ್ ಸೊಡುನ್ ಸಿರಿಯಾ ದೆಶ್ಯಾಕ್ಡೆ ಜಾವ್ನ್, ತಿರ್ ಶಾರಾತ್ ಢೊನ್ ಇಬೆಕರ್ಲ್ಯಾಂವ್, ಕಶ್ಯಾಕ್ ಮಟ್ಲ್ಯಾರ್, ಥೈ ಢೊನಾತ್ನಾ ಸಾಮಾನ್ ಉತರ್ತಲೆ ಹೊತ್ತೆ. ಅಧ್ಯಾಯವನ್ನು ನೋಡಿ |
ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.