Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:32 - ಪರಿಶುದ್ದ ಬೈಬಲ್‌

32 ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಾಬೊಡ್ತೊಬ್ ತೆನಿ ಉಲ್ಲಿ ಸೆನಾಧಿಕಾರಿಯಾ, ಅನಿ ಸೈನಿಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ಘೆವ್ನ್ ಲೊಕಾಂಚೊ ತಾಂಡೊ ಹೊತ್ತ್ಯಾಕ್ಡೆ ಗೆಲೊ ಸೆನಾಧಿಪತಿಕ್ ಅನಿ ತೆಚ್ಯಾ ಸೈನಿಕಾಕ್ನಿ ಬಗುನ್ ಲೊಕಾನಿ ಪಾವ್ಲುಕ್ ಮಾರ್‍ತಲೆ ಇಬೆ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:32
8 ತಿಳಿವುಗಳ ಹೋಲಿಕೆ  

ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.


ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.


“ನಾನು, ‘ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು