39 ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.
39 ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
39 ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
39 ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ?
ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.
ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,