ಅಪೊಸ್ತಲರ ಕೃತ್ಯಗಳು 22:1 - ಪರಿಶುದ್ದ ಬೈಬಲ್1 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.