Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:12 - ಪರಿಶುದ್ದ ಬೈಬಲ್‌

12 “ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದಮಸ್ಕಾತ್ ಅನನಿಯ್ ಮನ್ತಲ್ಲೊ ಮಾಜ್ಯಾ ಜಗ್ಗೊಳ್ ಯೆಲೊ, ತೊ ದೆವಸ್ಪಾನಾಚೊ ಮಾನುಸ್ ಹೊಲ್ಲೊ, ತೊ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಮಾನುನ್ ಘೆವ್ನ್ ಜಾತಲೊ ಹೊಲ್ಲೊ, ಥೈ ಹೊತ್ತಿ ಜುದೆವಾಂಚಿ ಸಗ್ಳಿ ಲೊಕಾ ತೆಕಾ ಮಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:12
10 ತಿಳಿವುಗಳ ಹೋಲಿಕೆ  

ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.


ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು