Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:15 - ಪರಿಶುದ್ದ ಬೈಬಲ್‌

15 ನೀನು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಎಲ್ಲಾ ಜನರಿಗೆ ಸಾಕ್ಷಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಬಗಲ್ಲಿ ಅನಿ ಆಯ್ಕಲ್ಲಿ ಸಂಗ್ತಿಯಾ ಸಗ್ಳಿ ಸಗ್ಳ್ಯಾ ಲೊಕಾಕ್ನಿ ಸಾಕ್ಷಿ ಹೊವ್ನ್ ರಾತೈಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:15
11 ತಿಳಿವುಗಳ ಹೋಲಿಕೆ  

ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು