ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.