Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:18 - ಪರಿಶುದ್ದ ಬೈಬಲ್‌

18 ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು - ನೀನು ತ್ವರೆಪಟ್ಟು ಬೇಗನೆ ಯೆರೂಸಲೇವಿುನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಧನಿಯಾಕ್ ಬಗಟ್ಲೊ ತನ್ನಾ ಮಾಕಾ, ತಡೊ ಕರಿನಸ್ತಾನಾ ಜೆರುಜಲೆಮಾಕ್ ಜಾ, ಕಶ್ಯಾಕ್ ಮಟ್ಲ್ಯಾರ್, ಹಿ ಲೊಕಾ ಮಾಜ್ಯಾ ವಿಶಯಾತ್ ತುಜಿ ಸಾಕ್ಷಿ ಒಪ್ಪುನ್ ಘೆಯ್‌ನ್ಯಾತ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:18
7 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು