20 ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.
20 ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
20 ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.
ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.
ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)