Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:28 - ಪರಿಶುದ್ದ ಬೈಬಲ್‌

28 ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಪೌಲನು, “ಹೌದು,” ಎಂದನು. “ನಾನು ರೋಮಿನ ಪೌರನಾಗುವ ಹಕ್ಕನ್ನು ಬಹಳ ಹಣತೆತ್ತು ಪಡೆಯಬೇಕಾಯಿತು,” ಎಂದು ಸಹಸ್ರಾಧಿಪತಿ ಹೇಳಿದಾಗ, ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪೌರನು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು, ಹೌದು ಅಂದನು. ಅದಕ್ಕೆ ಸಹಸ್ರಾಧಿಪತಿಯು - ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು ಅನ್ನಲು ಪೌಲನು - ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಸೈನಿಕಾಚ್ಯಾ ಮುಂಖಡಾನ್, ಮಿಯಾ ರೊಮ್ ಶಾರಾಚೊ ಮಾನುಸ್ ಹೊವ್ಕ್ ಲೈ ಪೈಸೆ ದಿಲಾ ಮನುನ್ ಸಾಂಗ್ಲ್ಯಾನ್ ಖರೆ ಪಾವ್ಲುನ್, ಮಿಯಾ ಜಲ್ಮಿಚ್ ರೊಮಾಚೊ ಮಾನುಸ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:28
4 ತಿಳಿವುಗಳ ಹೋಲಿಕೆ  

ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು.


ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು