ಅಪೊಸ್ತಲರ ಕೃತ್ಯಗಳು 22:4 - ಪರಿಶುದ್ದ ಬೈಬಲ್4 ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜೆಜುಚ್ಯಾ ವಾಟೆನ್ ಕೊನ್ ಜಾತಾತ್ ತೆಂಕಾ ಮಿಯಾ ತರಾಸ್ ದಿಲಾ ಮಾಜ್ಯಾ ವೈನಾ ತೆಂಚ್ಯಾತ್ ಉಲ್ಲ್ಯಾಲೊಕಾಕ್ನಿ ಮರಿ ಪಾತರ್ ತರಾಸ್ ದಿಲೊ, ಅನಿ ಘವ್ಮಾನ್ಸಾಕ್ನಿ ಅನಿ ಬಾಯ್ಕೊಮಾನ್ಸಾಕ್ನಿ ಭಾಂದುನ್ ಬಂದಿಖಾನ್ಯಾತ್ ಘಾಲುಕ್ ಲಾವ್ಲೊ. ಅಧ್ಯಾಯವನ್ನು ನೋಡಿ |