ಅಪೊಸ್ತಲರ ಕೃತ್ಯಗಳು 22:5 - ಪರಿಶುದ್ದ ಬೈಬಲ್5 “ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ. ಅಧ್ಯಾಯವನ್ನು ನೋಡಿ |
ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.