Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:1 - ಪರಿಶುದ್ದ ಬೈಬಲ್‌

1 ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಪಾವ್ಲುನ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಕುಚ್ ಬಗುನ್, “ಮಾಜ್ಯಾ ಭಾವಾನು ಮಿಯಾ ಆಜ್ ಪತರ್ ದೆವಾಚ್ಯಾ ಫಿಡೆ ಬರ್‍ಯಾ ಮಾನಾನ್ ಚಲುನ್ಗೆತ್ ಯೆಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:1
17 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.


“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.


ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.


ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು