Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:12 - ಪರಿಶುದ್ದ ಬೈಬಲ್‌

12 ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ - ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದುಸ್ರ್ಯಾಂದಿಸಿ ಸಕ್ಕಾಳಿ ಜುದೆವಾಂಚ್ಯಾ ಥೊಡ್ಯಾ ಲೊಕಾನಿ ಪಾವ್ಲುಕ್ ವಿರೊದ್ ಗೊಳಾ ಹೊವ್ನ್ ಉಪಾಯ್ ಕರಲ್ಲ್ಯಾನಿ, ಅಮಿ ಪಾವ್ಲುಚೊ ಜಿವ್ ಕಾಡಿ ಪತರ್ ಅಮಿ ಕಾಯ್ಬಿ ಪಿನಾಂವ್, ಅನಿ ಕಾಯ್ಬಿ ಖಾಯ್ನಾಂವ್ ಮನುನ್ ಆನ್ ಕರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:12
33 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.


ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ’” ಎಂದನು.


ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.


ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.


ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’


ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.


ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.


ಹೀಗೆ ಸುಮಾರು ನಲವತ್ತಕ್ಕಿಂತಲೂ ಹೆಚ್ಚು ಮಂದಿ ಹರಕೆ ಮಾಡಿಕೊಂಡಿದ್ದರು.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಮೊರ್ದೆಕೈಗೆ ಈ ವಿಷಯ ಗೊತ್ತಾದಾಗ ಅವನು ಅದನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು