ಅಪೊಸ್ತಲರ ಕೃತ್ಯಗಳು 23:15 - ಪರಿಶುದ್ದ ಬೈಬಲ್15 ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆ ಹೊವ್ನ್, ಅತ್ತಾ ತುಮಿ ಕಾಯ್ ಕರುಚೆ ಮಟ್ಲ್ಯಾರ್, ಸೈನಿಕಾಚ್ಯಾ ಅಧಿಕಾರಿಕ್ ಅನಿ ಸಗ್ಳ್ಯಾ ಜುದೆವಾಂಚ್ಯಾ ಮುಖಂಡಾಕ್ನಿ ಎಕ್ ಖಬರ್ ಧಾಡುನ್ ದಿವಾ, ಪಾವ್ಲುಕ್ ಅನಿಬಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಅಮ್ಚ್ಯಾ ಜಗ್ಗೊಳ್ ಬಲ್ವುನ್ ಹಾನುಕ್ ರೊಮಾತ್ಲ್ಯಾ ಅಧಿಕಾರಿಕ್ ಸಾಂಗಾ, ಪಾವ್ಲು ಹಿತ್ತೆ ಯೆತಾನಾಚ್ ಅಮಿ ವಾಟೆಕ್ ರಾಕುನ್ಗೆತ್ ರಾವ್ನ್ ತೆಕಾ ಜಿವ್ ಕಾಡ್ತಾಂವ್ ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.