ಅಪೊಸ್ತಲರ ಕೃತ್ಯಗಳು 23:22 - ಪರಿಶುದ್ದ ಬೈಬಲ್22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ತ್ಯಾ ಸೈನಿಕಾಂಚ್ಯಾ ಮುಖಂಡಾನ್, “ತಿಯಾ ಮಾಕಾ ಸಾಂಗಲ್ಲ್ಯಾ ಯೆವ್ಜನಿಚ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕ್ಕೊ” ಮನುನ್ ಸಾಂಗುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಧಾಡುನ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |