ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.
ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.