ಅಪೊಸ್ತಲರ ಕೃತ್ಯಗಳು 23:34 - ಪರಿಶುದ್ದ ಬೈಬಲ್34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ರಾಜ್ಯ್ ಪಾಲಾನ್ ಚಿಟ್ ವಾಚ್ಲ್ಯಾನ್ ಅನಿ ತೆನಿ ಪಾವ್ಲುಕ್, “ತಿಯಾ ಖಲ್ಯಾ ದೆಶ್ಯಾಚೊ?” ಮನುನ್ ಇಚಾರ್ತಾನಾ, ಸಿಲಿಸಿಯಾಚೊ ಮನ್ತಲೆ ಕಳುನ್ ಯೆಲೆ. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.