ಅಪೊಸ್ತಲರ ಕೃತ್ಯಗಳು 23:35 - ಪರಿಶುದ್ದ ಬೈಬಲ್35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.