ಅಪೊಸ್ತಲರ ಕೃತ್ಯಗಳು 23:6 - ಪರಿಶುದ್ದ ಬೈಬಲ್6 ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.