Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:16 - ಪರಿಶುದ್ದ ಬೈಬಲ್‌

16 ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾಕಾ ಹೊತಾ ತವ್ಡೆ ಮಿಯಾ ಸಮಾ ಮನುನ್ ವಿಶ್ವಾಸ್ ಕರಲೆಚ್ ದೆವಾಚ್ಯಾ ಇದ್ರಾಕ್ ಅನಿ ಮಾನ್ಸಾಂಚ್ಯಾ ಇದ್ರಾಕ್ ಬರೆ ಕರುಚೆ ಮನುನ್ ಮಿಯಾ ದಾಕ್ವುಕ್ ದಿವ್ಕ್ ಪ್ರಯತ್ನ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:16
20 ತಿಳಿವುಗಳ ಹೋಲಿಕೆ  

ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.


ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು.


ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.


ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು