Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:18 - ಪರಿಶುದ್ದ ಬೈಬಲ್‌

18 ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಹೆ ಕಾಮಾ ಕರಿತ್ ರಾತಾನಾ ಥೊಡ್ಯಾ ಲೊಕಾನಿ ಮಾಕಾ ದೆವಾಚ್ಯಾ ಗುಡಿತ್ ಬಗ್ಲ್ಯಾನಿ, ಕಶೆ ನಿತಳ್ ರಾವ್ಚೆ ಮನುನ್ ಮಿಯಾ ಸಾಂಗಲೊ ಕಸ್ಲೊ ಧಾಂದಲ್ ಬಿ ಕರುಕ್ ನತ್ತೊ. ಮಾಜ್ಯಾ ಅಜುಭಾಜುಕ್ ಖಲಿಬಿ ಲೊಕಾ ನತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:18
7 ತಿಳಿವುಗಳ ಹೋಲಿಕೆ  

“ಈ ಕಾರಣಗಳಿಂದ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.


ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.


ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,


ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.


ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.


ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು