Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:5 - ಪರಿಶುದ್ದ ಬೈಬಲ್‌

5 ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಮಾನ್ಸಾಕ್ಡೆ ಅಮಿ ಅಪಾಯ್ ಹೊತ್ತೆ ಹಾಳ್ ಕರ್‍ತಲೆ ಬಗಲ್ಲ್ಯಾಂವ್, ಜಗಾತ್ ಜುದೆವಾಂಚಿ ಲೊಕಾ ಖೈಯ್ ರಾಲ್ಲ್ಯಾರ್ ಬಿ ಥೈ ಸಗ್ಳ್ಯಾಕ್ಡೆಬಿ ಹೆನಿ ದಾಂದಲ್ ಉಟ್ವಲ್ಲೆಚ್ ಹಾಯ್, ಅನಿ ಹೊ ನಜರೆನ್ ಮನ್ತಲ್ಯಾ ತಾಂಡ್ಯಾಚೊ ಮುಂಖಡ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:5
32 ತಿಳಿವುಗಳ ಹೋಲಿಕೆ  

“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.


ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.


ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


(ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)


ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.


ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.


ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.


(ಬರಬ್ಬನು ಪಟ್ಟಣದಲ್ಲಿ ದಂಗೆ ಎಬ್ಬಿಸಿದ್ದರಿಂದ ಸೆರೆಮನೆಯಲ್ಲಿದ್ದನು. ಅವನು ಕೆಲವು ಜನರನ್ನು ಕೊಂದಿದ್ದನು.)


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.


ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು