10-11 ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.
10 ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
10 ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆಮಾಡಬೇಕೆಂದಿದ್ದರು.
ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.
ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.
ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.