ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.
ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.
ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.