Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:24 - ಪರಿಶುದ್ದ ಬೈಬಲ್‌

24 ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಫೆಸ್ತನು, “ಅಗ್ರಿಪ್ಪರಾಜರೇ, ಇಲ್ಲಿ ನೆರೆದಿರುವ ಮಹಾಜನರೇ, ನೀವು ನೋಡುತ್ತಿರುವ ಈ ವ್ಯಕ್ತಿಯ ವಿರುದ್ಧ ಇಲ್ಲಿಯೂ ಜೆರುಸಲೇಮಿನಲ್ಲಿಯೂ ಯೆಹೂದ್ಯರೆಲ್ಲರೂ ನನ್ನಲ್ಲಿ ಮನವಿಮಾಡಿಕೊಂಡಿದ್ದಾರೆ. ಇವನನ್ನು ಜೀವಸಹಿತ ಬಿಡಬಾರದೆಂದು ಕೂಗಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಫೆಸ್ತನು - ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ - ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇವಿುನಲ್ಲಿಯೂ ಇಲ್ಲಿಯೂ ನನ್ನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಫೆಸ್ತಾನ್ ಅಶೆ ಮಟ್ಲ್ಯಾನ್: ರಾಜಾ ಅಗ್ರಿಪ್ಪ್, ಅನಿ ಹಿತ್ತೆ ಗೊಳಾ ಹೊವ್ನ್ ಯೆಲ್ಲ್ಯಾ ಸಗ್ಳ್ಯಾ ಲೊಕಾನು, ತುಮಿ ಬಗುಲಾಗಲ್ಲ್ಯಾ ಪಾವ್ಲುಚೆರ್ ಹಿತ್ತೆ ಹೊತ್ತ್ಯಾ ಜುದೆವಾಂಚ್ಯಾ ಲೊಕಾನಿ ಮಾಜ್ಯಾಕ್ಡೆ ಚಾಡಿ ಸಾಂಗುನ್, ಹೆಕಾ ಮರ್ನ್ನಾಚಿ ಶಿಕ್ಷಾ ಹೊಂವ್ದಿ ಮನುನ್ ದಾಂದಲ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:24
4 ತಿಳಿವುಗಳ ಹೋಲಿಕೆ  

ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.


ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು